ಕಲಬುರಗಿ : ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ ಬಿಸಿಎಂ ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಆಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ವಿದ್ಯಾರ್ಥಿನಿಯರು ಮಧ್ಯರಾತ್ರಿವರೆಗೂ ಹಾಸ್ಟೆಲ್‌ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದು, ಹೊರಗಿನ ಕೆಲ ಯುವಕರು ಕೂಡ ಹಾಸ್ಟೆಲ್‌ನಲ್ಲಿ ಇದ್ದರು ಎಂಬ ಆರೋಪಗಳು ಕೇಳಿಬಂದಿವೆ.
ಪ್ರಕರಣ ಬೆಳಕಿಗೆ ಬಂದ ಬಳಿಕ ಅದನ್ನು ಮುಚ್ಚಿಹಾಕಲು ವಿದ್ಯಾರ್ಥಿನಿಯರಿಂದ ಹಣ ವಸೂಲಿ ಮಾಡಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಹಾಸ್ಟೆಲ್ ವಾರ್ಡನ್ ಹಾಗೂ ವಿದ್ಯಾರ್ಥಿನಿಯ ನಡುವಿನ ಸಂಭಾಷಣೆ ಎನ್ನಲಾದ ಆಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸ್ಥಳೀಯರು ಹಾಗೂ ಕೆಲ ಸಂಘಟನೆಗಳು, ಕೆಲವು ವಾರ್ಡನ್‌ಗಳು ವಿದ್ಯಾರ್ಥಿನಿಯರ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಹಾಸ್ಟೆಲ್ ಅನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಈ ಹಿಂದೆಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಬಿಸಿಎಂ ಜಿಲ್ಲಾ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಲಾಗಿತ್ತು ಎನ್ನಲಾಗಿದೆ.
ಆದರೆ ದೂರುಗಳಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದು, ಘಟನೆಯ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!



















