ಮಂಗಳೂರು: ವಿದ್ಯಾರ್ಥಿನಿಯೋರ್ವಳು ತನ್ನ ಕಾಲೇಜಿಗೆ ತಾನೇ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಪ್ರತಿಷ್ಠಿತ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದ ಪ್ರಕರಣ ಬೇಧಿಸಿದ ಪೊಲೀಸರಿಗೆ ಈಗ ಶಾಕ್ ಎದುರಾಗಿದೆ. ಜೂ. 4ರಂದು ಉಳ್ಳಾಲದ ದೇರಳಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲನೆ ಮಾಡಿತ್ತು.
ಆರೋಪಿ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಸೆಮಿನಾರ್ ತಪ್ಪಿಸುವ ಉದ್ದೇಶದಿಂದ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದ್ದು, ಸದ್ಯ ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.