ಹುಬ್ಬಳ್ಳಿ: ರಾಮಸೇತು ಮೂಲಕ 28 ಕಿಲೋಮೀಟರ್ ಸ್ವಿಮ್ಮಿಂಗ್ ಮಾಡಿ ರಾಜ್ಯದ ಪೊಲೀಸ್ ಅಧಿಕಾರಿ ಹಾಗೂ ಎಂಬಿಬಿಎಸ್ ವಿದ್ಯಾರ್ಥಿ ಸಾಧನೆ ಮೆರೆದಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಠಾಣೆ ಪಿಐ ಮುರುಗೇಶ ಚನ್ನಣ್ಣವರ ಮತ್ತು ಎಂಬಿಬಿಎಸ್ ವಿದ್ಯಾರ್ಥಿ ಅಮನ್ ಶಾನಭಾಗ್ ಈ ಸಾಧನೆ ಮಾಡಿದ್ದಾರೆ. ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯವರೆಗೆ ಈಜಿ, ಸ್ವಿಮ್ಮಿಂಗ್ ರಿಲೇ ತಂಡದಲ್ಲಿ ಭಾಗಿಯಾಗುವ ಮೂಲಕ ಸಾಧನೆ ಮಾಡಿದ್ದಾರೆ.
ಉತ್ತರ ಪ್ರದೇಶ, ಹರಿಯಾಣ, ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿಗಳು ಹಾಗೂ ಅಂಗವಿಕಲ ಕ್ರೀಡಾಪಟುಗಳನ್ನು ಒಳಗೊಂಡಿರುವ ತಂಡ ಭಾಗವಹಿಸಿತ್ತು. ಹಿಂದೂ ಮಹಾಸಾಗರ ಮತ್ತು ಬಂಗಾಳಕೊಲ್ಲಿಯ ಸಮುದ್ರದಲ್ಲಿ ಕೇವಲ 8 ಗಂಟೆ 30 ನಿಮಷದಲ್ಲಿ 28 ಕಿಲೋ ಮೀಟರ್ ಈಜುವ ಮೂಲಕ ಸಾಧನೆ ಮಾಡಿದ್ದಾರೆ. ಹೀಗಾಗಿ ಹುಬ್ಬಳ್ಳಿಯ ಮುರುಗೇಶ್ ಚನ್ನಣ್ಣವರ, ಅಮನ್ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.