ಚಿಕ್ಕಮಗಳೂರು: ಮಳೆಯಿಂದ ತುಂಬಿದ್ದ ಕೆರೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಉಪ್ಪಳ್ಳಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 15 ವರ್ಷದ ವಿದ್ಯಾರ್ಥಿ ಭಾನುಪ್ರಕಾಶ್ ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ಮಳೆಯ ನಡುವೆ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಬಾಲಕ ತೆರಳಿದ್ದ ಎಂದು ತಿಳಿದು ಬಂದಿದೆ.
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶಾಲೆಗೆ ರಜೆ ನೀಡಿತ್ತು. ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈಜಾಡಲು ವಿದ್ಯಾರ್ಥಿ ತೆರಳಿದ್ದ. ಆದರೆ, ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹ ಹೊರ ತೆಗೆದಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.