ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಹೊರ ಬಿದ್ದಿದ್ದು, ನಾಲ್ವರು ವಿದ್ಯಾರ್ಥಿಗಳು ಔಟ್ ಆಫ್ ಔಟ್ ಅಂಕ ಪಡೆದಿದ್ದಾರೆ.
87,330 ವಿದ್ಯಾರ್ಥಿಗಳು (Students) ಉತ್ತೀರ್ಣರಾಗಿದ್ದು, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ. ಆ ಮೂಲಕ ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್ ಆಫ್ ಔಟ್ ಅಂಕ ಬಂದಿದೆ. ರಾಜ್ಯದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ಪರೀಕ್ಷೆಗಳು ನಡೆದಿದ್ದವು. ಪರೀಕ್ಷೆ-1 ಫಲಿತಾಂಶ ಮೇ 24ರಂದು ಪ್ರಕಟವಾಗಿತ್ತು. ಶೇ.62.34ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು.