ಚಾಮರಾಜನಗರ : ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಉದುರುತ್ತಿದೆ. ಶಾಲಾ ಕಟ್ಟಡ ದುರಸ್ತಿಪಡಿಸಿಕೊಡುವಂತೆ ವಿದ್ಯಾರ್ಥಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಮೊರೆ ಇಟ್ಟಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಚಿಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆ ಬಂದರೆ ಕೊಠಡಿಗಳು ಸೋರುತ್ತಿವೆ. ಶೌಚಾಲಯ ವ್ಯವಸ್ಥೆ ಇಲ್ಲ, ಪೀಠೋಪಕರಣಗಳಿಲ್ಲ, ಆಟವಾಡಲು ಮೈದಾನ ಇಲ್ಲ. ಅವ್ಯವಸ್ಥೆಯಿಂದ ಶಾಲಾ ಮಕ್ಕಳು ಕೂಡ ಬೇಸತ್ತು ಹೋಗಿದ್ದಾರೆ.
ಹಲವು ಬಾರಿ ದೂರು ನೀಡಿದರು ಕೂಡ ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಶಿಕ್ಷಣ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.