ಕೊಪ್ಪಳ : ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಸೇವೆನೆ ಮಾಡಿದ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಬಳಿ ಗಾಂಜಾ ಸೇವೆನೆ ಮಾಡುತ್ತಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳನ್ನು ಬಂಧಿಸಿ, ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವೆನೆ ಮಾಡಿರುವುದು ದೃಢವಾಗಿದೆ.

ಬಸವನಗೌಡ(21), ಕಿರಣ್ ಕುಮಾರ್(20) ಬಂಧಿತ ವಿದ್ಯಾರ್ಥಿಗಳು, ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ.

ಕಾರಟಗಿ ತಾಲೂಕಿನ ತೊಂಡಿಹಾಳ ಗ್ರಾಮದ ಹನುಮನಗೌಡ ಎಂಬಾತ ತನ್ನ ಜಮೀನಿನಲ್ಲಿ ಗಾಂಜಾ ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂಬ ಆರೋಪದ ಮೇಲೆ ಬಂಧಿಸಿದ ಪೊಲೀಸರು ,258 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಗಂಗಾವತಿ ಗ್ರಾಮೀಣ ಸಬ್ ಇನ್ಸ್ಪೆಕ್ಟರ್ ರಂಗಪ್ಪ ದೊಡ್ಡಮನಿ ನೇತೃತ್ವದಲ್ಲಿ ಕಾರ್ಯಚರಣೆ ಕೈಗೊಳ್ಳಲಾಗಿತ್ತು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



















