ಮಂಡ್ಯ: ತೆರೆದ ಬಾವಿಯಲ್ಲಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಡ್ಯದ ಕೆಆರ್ ಪೇಟೆ ತಾಲ್ಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹಳೇಸಿದ್ದರಹಳ್ಳಿ ನಿವಾಸಿ ಕರಣ್ (22) ಮೃತ ವಿದ್ಯಾರ್ಥಿ. ಹಾಸನ ಜಿಲ್ಲೆಯ ಶ್ರವಣಬೆಳಗೊಳದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದರು. ಘಟನಾ ಸ್ಥಳದಲ್ಲಿನ ತೆರೆದ ಬಾವಿಯ ಬಳಿ ಒಂದು ಬೈಕ್ ಮತ್ತು ಮೊಬೈಲ್ ಫೋನ್ ಪತ್ತೆಯಾಗಿದ್ದು, ವಿದ್ಯಾರ್ಥಿಯ ಮೃತ ದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವವನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಘಟನಾ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಜನಪ್ರತಿನಿಧಿಗಳ ಆಶ್ವಾಸನೆಗಳಿಗೆ ಬೇಸತ್ತು ರಸ್ತೆ ದುರಸ್ಥಿಗೆ ಮುಂದಾದ ಗ್ರಾಮಸ್ಥರು..!



















