ಬಳ್ಳಾರಿ: ಪುಡಿ ರೌಡಿಗಳಂತೆ ವಿದ್ಯಾರ್ಥಿಗಳು ಶಾಲಾ ಕೊಠಡಿಯಲ್ಲಿ ಬಡಿದಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಜಿಲ್ಲೆಯ (Ballari) ಸಿರಗುಪ್ಪದ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಓರ್ವ ವಿದ್ಯಾರ್ಥಿಯ ಮೇಲೆ ಹಲವರು ದಾಳಿ ನಡೆಸಿ ಹಲ್ಲೆ ಮಾಡಿದ್ದಾರೆ. ಶಾಲೆಯಲ್ಲಿ ಶಿಕ್ಷಕರಿದ್ದರೂ ಡೋಂಟ್ ಕೇರ್ ಎಂದಿದ್ದಾರೆ. ಈ ಘಟನೆ ಕಂಡು ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಅಲ್ಲದೇ, ವಿದ್ಯಾರ್ಥಿಗಳು ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳು 10ನೇ ತರಗತಿಯಲ್ಲಿ ಓದುತ್ತಿದ್ದರು ಎನ್ನಲಾಗಿದೆ. ಹಲ್ಲೆ ಮಾಡುತ್ತಾ ವಿಡಿಯೋ ಚಿತ್ರೀಕರಣ ಮಾಡಿಕೊಂಡಿರುವ ವಿದ್ಯಾರ್ಥಿಗಳ ಈ ವರ್ತನೆಗೆ ಶಿಕ್ಷರೊಬ್ಬರ ಕುಮ್ಮಕ್ಕು ಇದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಇನ್ನುಳಿದ ಶಿಕ್ಷಕರು ಈ ಘಟನೆಗೆ ಮೌನ ವಹಿಸಿದ್ದಾರೆ ಎನ್ನಲಾಗಿದೆ.