ಕಲಬುರಗಿ : ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ವಿದ್ಯಾರ್ಥಿಗಳ ಸಜ್ಜಾಗಿದ್ದಾರೆ. ಧಾರವಾಡ ಬಳಿಕ ಇದೀಗ ಕಲಬುರಗಿಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಮಾರ್ಚ್ 27ರಂದು ವಿದ್ಯಾರ್ಥಿಳು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ.
ಈ ಬಗ್ಗೆ ಕಲಬುರಗಿಯಲ್ಲಿ ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಕಾಂತಾಕುಮಾರ ಮಾತನಾಡಿ, ಮಾ.27ರಂದು ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಧಾರವಾಡ ಪ್ರತಿಭಟನೆ ವೇಳೆ ಒಂದು ತಿಂಗಳಲ್ಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳೊದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ತಿಂಗಳು ಕಳೆದರು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ ಎಂದು ತಿಳಿಸಿದ್ದಾರೆ.
ಮಾ23 ರಂದು ಪ್ರತಿಭಟನೆ ನಡೆಸಲು ಮನವಿ ಸಲ್ಲಿಸಲಾಗಿತ್ತು. ಆದರೆ ನಮ್ಮ ಮನವಿಯನ್ನ ಪೊಲೀಸ್ ಇಲಾಖೆ ತಿರಸ್ಕರಿಸಿದ್ದರಿಂದ ನಾವು ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದೇವೆ. ಕಲಬುರಗಿ ಹೈಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ನಮ್ಮ ಮನವಿ ಪುರಸ್ಕರಿಸಿ ಪ್ರತಿಭಟನೆ ನಡೆಸಲು ಹೈಕೋರ್ಟ್ ಅವಕಾಶ ನೀಡೋ ಭರವಸೆ ಇದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?


















