ಗದಗ: ಜಿಲ್ಲೆಯ ಹಲವೆಡೆ ರಾತ್ರಿಯಿಡೀ ಭಾರಿ ಮಳೆಯಾಗುತ್ತಿದ್ದು, ಶಾಲೆಗೆ ಹೋಗಲು ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ.
ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ತಂಬಿ ಉಕ್ಕಿ ಹರಿಯುತ್ತಿವೆ. ಗಜೇಂದ್ರಗಡ ತಾಲೂಕಿನ ದ್ಯಾಮುಣಸಿ ಗ್ರಾಮದ ಬಳಿಯ ಹಳ್ಳ ಉಕ್ಕಿ ಹರಿಯುತ್ತಿದ್ದು, ಶಾಲೆ, ಕಾಲೇಜ್ ಗಳಿಗೆ ಹೋಗಲು ವಿದ್ಯಾರ್ಥಿಗಳ ಪರದಾಟ ನಡೆಸುವಂತಾಗಿದೆ.
ಅಲ್ಲದೇ, ಮಳೆ ಹೆಚ್ಚಾದ ಕಾರಣ ಕೃಷಿ ಚಟುವಟಿಕೆ ಹಾಗೂ ಬೇರೆ ಕೆಲಸ ಕಾರ್ಯಗಳಿಗೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲೆಯ ಹಲವಡೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ.