ರಾಯಚೂರು: ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ ನಡೆದಿರುವ ಘಟನೆಯೊಂದು ನಡೆದಿದೆ.
ಕತ್ತು ಸೀಳಿ ಎಂಎಸ್ಸಿ ವಿದ್ಯಾರ್ಥಿನಿಯ (student) ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಸಿಂಧನೂರು ಬಳಿ ನಡೆದಿದೆ.
ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಶಿಫಾ (22) ಸಾವನ್ನಪ್ಪಿರುವ ವಿದ್ಯಾರ್ಥಿನಿ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮುಬಿನ್ ನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಿಫಾ ಲಿಂಗಸುಗೂರಿನ ನಿವಾಸಿ ಎನ್ನಲಾಗಿದೆ.