ಬೆಂಗಳೂರು : ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿದ್ದ ಹೆಚ್. ಸುಭಾನ್ ಸಾಬ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದಾರೆ. ಹೆಚ್. ಸುಭಾನ್ ಸಾಬ್ ಅವರು ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ಹಿರಿಯ ನಾಯಕರುಗಳ ವಿರುದ್ಧ ಅವಹೇಳನಕಾರಿ ಶಬ್ದಗಳನ್ನು ಬಳಸಿ ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡಿದ್ದಾರೆ. ಇವರ ಹೇಳಿಕೆಗಳು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು ಪಕ್ಷದ ಶಿಸ್ತನ್ನು ಉಲ್ಲಂಘಿಸಿಸಲಾಗಿದೆ ಎಂದು ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಆದೇಶದಲ್ಲಿ ಕಾರ್ಯಾಧ್ಯಕ್ಷರು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : IPL 19ನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ – ಇಲ್ಲಿದೆ ಮಾಹಿತಿ!



















