ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಕೆಲವು ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಲ್ಲದೇ, ಜಿಲ್ಲೆಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಮುಂದುವರೆದಿದೆ.
ಯಾವುದೇ ಅನಾಹುತ ನಡೆಯಬಾರದು ಎಂಬ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ವಸ್ತಾರೆ, ಮೂಗ್ತಿಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಲಗಗಳ ಹಾವಳಿ ಮಿತಿ ಮೀರಿದೆ. ಹೀಗಾಗಿ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 2 ಗ್ರಾಮ ಪಂಚಾಯಿತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಗ್ರಾಮಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಭಾಗದಲ್ಲಿ ರೈತರು ಬೆಳೆದ ಕಾಫಿ, ಮೆಣಸು, ಬಾಳೆ ಬೆಳೆಗಳನ್ನು ಕಾಡಾನೆಗಳು ಸಂಪೂರ್ಣವಾಗಿ ನಾಶ ಮಾಡಿವೆ. ಮಾರಿಕಟ್ಟೆ ಗ್ರಾಮದ ಕಾಫಿತೋಟವೊಂದರಲ್ಲಿ ಈ ಕಾಡಾನೆಗಳು ಬೀಡು ಬಿಟ್ಟಿವೆ.
ಚಿಕ್ಕಮಗಳೂರು ತಾಲೂಕು ಮಗ್ನಿಹಳ್ಳಿ, ಮತ್ತು ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ರಿಯ ಗ್ರಾಮಗಳಾದ ಮತ್ತಾವರ, ದಂಬದಹಳ್ಳಿ, ಶಿರಗುಂದ, ದುಂಗೆರೆ, ಮೂಗ್ರಿಹಳ್ಳಿ, ಕದ್ರಿಮಿದ್ರಿ ಹಾಗೂ ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಗುಡ್ಡೆ, ವಸ್ತಾರೆ, ನಂದಿಕೆರೆ, ದಹುಲುವಾಲೆ, ತೊಂಡವಳಿ, ಸಂಸೆ, ದಿಣ್ಣೆಕರೆ, ಗ್ರಾಮಗಳಲಿ, ಬಿಟ್ಟು ಆನೆಗಳ ಗುಂಪು ಓಡಾಡುತ್ತಿದ್ದು, ನಿಷೇಧಾಜ್ಞೆ ವಿಧಿಸಿ, ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸರ್ಕಾರಿ ನೌಕರರಸ್ಥರು ಮಾತ್ರ ಕರ್ತವ್ಯಕ್ಕೆ ಹಾಜರಾಗಬೇಕಿದೆ.