ಬೆಂಗಳೂರು: ಸಂಚಾರಿ ಪೊಲೀಸರ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ತಪ್ಪಿದ ಘಟನೆ ನಗರದಲ್ಲಿ ನಡೆದಿದೆ. ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ರವಿಕುಮಾರ್ ತಕ್ಷಣ ಬಸ್‌ನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು ಕ್ಷಣಾರ್ಧದಲ್ಲೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್‌ನಿಂದ ಹೊರಗೆ ಇಳಿಸಿದ್ದಾರೆ.
ಬಳಿಕ ಅಗ್ನಿಶಾಮಕ ಇಲಾಖೆಗೆ ತಕ್ಷಣ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಪಿಎಸ್‌ಐ ರವಿಕುಮಾರ್ ಅವರ ಸಮಯೋಚಿತ ಕ್ರಮದಿಂದ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದು, ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ನಡೆಯುತ್ತಿದೆ.



















