ಬೆಂಗಳೂರು : ಕನ್ನಡ ಚಿತ್ರರಂಗದ ನಟ ಕಿಚ್ಚ ಸುದೀಪ್ ಅವರ ಬಗ್ಗೆ ಅವಹೇಳನಕಾರಿ ವರ್ತನೆ ನಡೆಸಿದ ಆರೋಪದಡಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಡಾಗ್ ಸತೀಶ್ ವಿರುದ್ಧ ದೂರು ದಾಖಲಾಗಿದೆ.
ದೂರಿನ ಪ್ರಕಾರ, “ಮಾರ್ಕ್” ಸಿನಿಮಾದ ಹಾಡನ್ನು ಶೌಚಾಲಯಕ್ಕೆ ಹೋಗುವ ಸಂದರ್ಭದಲ್ಲಿನ ವಿಡಿಯೋದಲ್ಲಿ ಬಳಸಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿದೆ. ಇದರಿಂದ ನಟ ಸುದೀಪ್ ಅವರ ಅವಮಾನವಾಗಿದೆ ಎಂದು ಆರೋಪಿಸಲಾಗಿದೆ.
ಪ್ರಚಾರದ ಹುಚ್ಚಿಗಾಗಿ ಉದ್ದೇಶಪೂರ್ವಕವಾಗಿ ಈ ರೀತಿಯ ನಡೆ ಕೈಗೊಳ್ಳಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಇದನ್ನೂ ಓದಿ : ಒಂದೇ ದಿನ ಇಬ್ಬರಿಂದ ಅತ್ಯಾಚಾರಕ್ಕೊಳಗಾದ ಯುವತಿ | ಬೆಳಗ್ಗೆ ಶವವಾಗಿ ಪತ್ತೆ



















