ಮ್ಯಾಕ್ಸ್ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ನಟ ಕಿಚ್ಚ ಸುದೀಪ್ (Kiccha Sudeep) ಭಾನುವಾರ ಚಾಮುಂಡಿ ಬೆಟ್ಟಕ್ಕೆ (Chamundi Hill) ಭೇಟಿ ನೀಡಿ ದೇವಿ ದರ್ಶನ ಪಡೆದಿದ್ದಾರೆ.
ಬೆಳಗ್ಗೆಯೇ ಮೈಸೂರಿಗೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸುದೀಪ್ ಬರುವ ಸುದ್ದಿ ತಿಳಿಯುತ್ತಿದ್ದಂತೆ ಬೆಟ್ಟದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.
ಕಿಚ್ಚ ಸುದೀಪ್ ನೋಡಿ ಫ್ಯಾನ್ಸ್ ಶಿಳ್ಳೆ ಹೊಡೆದು ಜೈಕಾರ ಹಾಕಿ ಸಂಭ್ರಮಿಸಿದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಸುದೀಪ್, ನಂತರ ಹೊರ ಬಂದು ಅಭಿಮಾನಿಗಳತ್ತ ಕೈಬೀಸಿದರು. ನಟನನ್ನು ಕಂಡು ಫ್ಯಾನ್ಸ್ ಸಂತಸ ವ್ಯಕ್ತಪಡಿಸಿದರು.
ಮ್ಯಾಕ್ಸ್’ ಸಿನಿಮಾ ಡಿ.25 ರಂದು ರಾಜ್ಯಾದ್ಯಂತ ತೆರೆ ಕಂಡಿದೆ. ಬಿಡುಗಡೆಯಾಗಿ ನಾಲ್ಕು ದಿನ ಕಳೆದಿದ್ದು, ಬಾಕ್ಸ್ ಆಫೀಸ್ ನಲ್ಲಿ ಹಲವು ದಾಖಲೆಯನ್ನು ಚಿತ್ರ ಬರೆದಿದೆ.