ಬೆಂಗಳೂರು : ನಟ ಕಿಚ್ಚ ಸುದೀಪ್ ಅವರು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಾಯಂಡಹಳ್ಳಿಯಲ್ಲಿ ರಾತ್ರಿಯೇ ಅಭಿಮಾನಿಗಳನ್ನ ಕಿಚ್ಚ ಬೇಟಿಯಾಗಿದ್ದಾರೆ. ಹುಟ್ಟುಹಬ್ಬದ ಹಿನ್ನೆಲೆ ತಮ್ಮ ಬಹು ನಿರೀಕ್ಷಿತ ಚಿತ್ರ “ಮಾರ್ಕ್” ಸಿನಿಮಾದ ಟೈಟಲ್ ಟೀಸರ್‌ನ್ನು ಬಿಡುಗಡೆ ಮಾಡಲಾಗಿದೆ. ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಇಷ್ಟು ದಿನ ಈ ಸಿನಿಮಾವನ್ನು ತಾತ್ಕಾಲಿಕವಾಗಿ ‘K 47’ ಎಂದು ಕರೆಯಲಾಗುತ್ತಿತ್ತು. ಇದೀಗ ಚಿತ್ರದ ಶೀರ್ಷಿಕೆ ‘ಮಾರ್ಕ್’ ಎಂಬುದು ಬಹಿರಂಗ ಆಗಿದೆ.
‘ಸತ್ಯಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿವೆ. ಟೈಟಲ್ ಟೀಸರ್ ನೋಡಿದ ಸುದೀಪ್ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ.
ಇನ್ನು ‘ಮ್ಯಾಕ್ಸ್” ಸಿನಿಮಾದ ಮೂಲಕ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ಬ್ಲಾಕ್ ಬಸ್ಟರ್ ಹಿಟ್ ನೀಡಿದ್ದರು. ಅವರೇ ಈಗ ‘ಮಾರ್ಕ್’ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಸಿನಿಮಾ ಶೂಟಿಂಗ್ ಸದ್ಯದಲ್ಲೇ ಮುಕ್ತಾಯ ಆಗಲಿದೆ. ಇದೇ ವರ್ಷ ಕ್ರಿಸ್ಮಸ್ ಹಬ್ಬಕ್ಕೆ ‘ಮಾರ್ಕ್’ ಬಿಡುಗಡೆ ಆಗಲಿದೆ.



















