ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ರೋಷಾಗ್ನಿ ಹೆಚ್ಚಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ನಡೆಸಿದ ಸಭೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿಗಳ ಜೊತೆ ಅನ್ನದಾತರ ಸಭೆ ನಡೆಯಲಿದ್ದು, ಮಧ್ಯಾಹ್ನದವರೆಗೂ ಸರ್ಕಾರಕ್ಕೆ ರೈತರು ಡೆಡ್ಲೈನ್ ನೀಡಿದ್ದಾರೆ.
ಇಂದು ಕಬ್ಬಿನ ದರ ನಿಗದಿ ಕುರಿತು ಅಧಿಕೃತ ಘೋಷಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಇತ್ತ ಬೆಳಗಾವಿ ಡಿಸಿ ಕಚೇರಿ ಬಳಿ ಹೋರಾಟಗಾರರ ಪ್ರತಿಭಟನೆಯ ಕಿಚ್ಚು ಜೋರಾಗಿದೆ.


















