ಬೀದರ್: ಹೈದರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿಯಲ್ಲಿರುವ ಮಂಗಲಗಿ ಟೋಲ್ ಪ್ಲಾಜಾ ಬಂದ್ ಮಾಡಿ ಅನ್ನದಾತರು ಹೋರಾಟಕ್ಕೆ ಇಳಿದಿದ್ದಾರೆ. ಇದರಿಂದ ಟೋಲ್ ಪ್ಲಾಜಾದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಎತ್ತಿನಬಂಡಿ ಹಾಗೂ ಟ್ರ್ಯಾಕ್ಟರ್ಗಳಲ್ಲಿ ಪ್ರತಿಭಟನೆಗೆ ಬಂದಿರುವ ರೈತರು, ಕಬ್ಬಿನ ಗಳ ಹಿಡಿದು ಹೋರಾಟದಲ್ಲಿ ಭಾಗವಹಿಸಿದ ರೈತ ಮಹಿಳೆಯರೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅನ್ನದಾತರ ಹೋರಾಟಕ್ಕೆ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.


















