ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬುಗೆ 3500 ರೂ. ದರ ನಿಗದಿಗೊಳಿಸಿ ಅರೆಯುವಿಕೆ ಆರಂಭಿಸಬೇಕೆಂದು ಬೇಡಿಕೆ ಇಟ್ಟಿದ್ದು, ಇಂದು ಸಂಜೆಯೊಳಗೆ ದರ ನಿಗದಿಗೊಳಿಸುವಂತೆ ರೈತರು ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಇನ್ನು, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಅಧೀನದಲ್ಲಿ ಬರುವ ಪಿಕೆಟಿಬಿ ಆಸ್ಪತ್ರೆಯ ಆವರಣದಲ್ಲಿ ಪೆರಿಫೆರಲ್ ಕ್ಯಾನ್ಸರ್ ಕೇಂದ್ರವನ್ನು ನಿರ್ಮಿಸಲು ಅವಶ್ಯವಿರುವ ಉಪಕರಣಗಳನ್ನು 94.50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಚರ್ಚೆ.
ಮಂಗಳೂರಿನ ಬಜೆ ಗ್ರಾಮದಲ್ಲಿ 1.56 ಎಕರ ವಿಸ್ತೀರ್ಣದ ಜಮೀನಿನಲ್ಲಿ “ಹಜ್ ಭವನ” ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು 20 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸಮಾಲೋಚನೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಸಾರಕ್ಕಿಯ ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರ (ISPS) ಮತ್ತು ಅಗರಂನ ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರ (ISPS) ನಿಂದ ಕಷಿಸಿ ವ್ಯಾಲಿಗೆ ಇರುವ ರೈಸಿಂಗ್ ಮೇನ್ ಸೇರಿ ಕೆ&ಸಿ ವ್ಯಾಲಿಯಲ್ಲಿ 60 MLD ತ್ಯಾಜ್ಯ ನೀರು ಶುದ್ದೀಕರಣ ಘಟಕ, ಅಗರಂನಲ್ಲಿ 120 MLD ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರ (ISPS) ಮತ್ತು ಸಾರಕ್ಕಿಯಲ್ಲಿ 18 MLD ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರ (ISPS) ಘಟಕಗಳ 05 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M)ಯನ್ನು 49.91 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಚರ್ಚೆ.
ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಸಮಾಲೋಚನೆ.
ವಿಜಯಪುರ ಜಿಲ್ಲೆಯ ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಕೆಲವು ಪ್ರದೇಶಗಳನ್ನು ಸೇರ್ಪಡೆಗೊಳಿಸುವ ಬಗ್ಗೆ.
ಯಾದಗಿರಿ ಜಿಲ್ಲೆಯ ದೋರನಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ
ಬೀದರ್ ಜಿಲ್ಲೆಯ ರಾಜೇಶ್ವರ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯನ್ನು ರಚಿಸುವ ಬಗ್ಗೆ.
ಶ್ರೀ ಚನ್ನಬಸವೇಶ್ವರ ಚಾರಿಟಬಲ್ ಟ್ರಸ್ಟ್, ದೊಡ್ಡ ಹುಣಸೆ ಕಲ್ಮಠ, ಸವಣೂರು, ಹಾವೇರಿ ಜಿಲ್ಲೆ ಇವರಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಂಚಿಕೆಯಾಗಿರುವ ಹುಬ್ಬಳ್ಳಿ ತಾಲ್ಲೂಕು, ಉಣಕಲ್ ಗ್ರಾಮದ ರಿ.ಸ.ನಂ.537/1+2+3 ರಲ್ಲಿನ ನಿವೇಶನ ಸಂಖ್ಯೆ:22 ರಲ್ಲಿರುವ 393.72 ಚ.ಮೀ ನಾಗರಿಕ ಸೌಲಭ್ಯ ನಿವೇಶನಕ್ಕೆ ನಿಗಧಿಪಡಿಸಿರುವ ಗುತ್ತಿಗೆ ಮೊತ್ತಕ್ಕೆ ವಿನಾಯಿತಿ ನೀಡುವ ಬಗ್ಗೆ.
‘ಕರ್ನಾಟಕ ನವೋದ್ಯಮ ನೀತಿ, 2025-2030’ ಕ್ಕೆ ಅನುಮೋದನೆ ನೀಡುವ ಬಗ್ಗೆ ಚರ್ಚೆ.
“Maintaining of Record of the Information regarding Arrest of Person Rules, 2025” ಅನುಮೋದನೆ ನೀಡುವ ಬಗ್ಗೆ ಸಮಾಲೋಚನೆ.
“The Karnataka Submission of Final rorm by Police Officer Rules, 2025” ಅನುಮೋದನೆ ನೀಡುವ ಬಗ್ಗೆ ಚರ್ಚೆ.
“The Karnataka Form and Manner of Information Rules, 2025ಕ್ಕೆ ಅನುಮೋದನೆ ನೀಡುವ ಬಗ್ಗೆ ಚರ್ಚೆ.
ಈ ಎಲ್ಲಾ ಮಹತ್ವದ ವಿಷಯಗಳ ಕುರಿತು ಇಂದು ಸಂಪುಟ ಸಭೆಯಲ್ಲಿ ಚರ್ಚಿಸಲಾಗುದುವುದ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸೊಸೈಟಿಯಿಂದ ಸಿಗಲಿದೆ 3 ಲಕ್ಷ ರೂ.ವರೆಗೂ ಸಾಲ : ಲಕ್ಷ್ಮೀ ಹೆಬ್ಬಾಳ್ಕರ್



















