ನವದೆಹಲಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty Murder Case) ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ (MHA) ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದ್ದು, ಪೊಲೀಸರು 11 ಜನರನ್ನು ಬಂಧಿಸಿದ್ದಾರೆ. ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಬಿಜೆಪಿ ನಾಯಕರು ಈ ಪ್ರಕರಣವನ್ನು ಎನ್ ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದರು. ಸದ್ಯ ಕೇಂದ್ರ ಸರ್ಕಾರ ಈ ಪ್ರಕರಣವನ್ನು ಎನ್ ಐಎಗೆ ವಹಿಸಿದೆ.