ಚಾಮರಾಜನಗರ: ಪ್ರೀತಿಸಿದ ಹುಡುಗಿ ಕೈ ಕೊಟ್ಟ ಹಿನ್ನೆಲೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನನ್ನ ಸಾವಿಗೆ ಆಕೆಯೇ ಕಾರಣ ಎಂದು ವೀಡಿಯೋ ಹರಿಬಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ಈ ಘಟನೆ ನಡೆದಿದೆ. ಸಂತೋಷ್(24) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಹಾಗೂ ಸಾಗಡೆ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಯುವತಿ ಬೇರೆ ಯುವಕನೊಂದಿಗೆ ಮೆಸೆಜ್ ಮಾಡಿದ್ದನ್ನು ಸಂತೋಷ್ ಪ್ರಶ್ನಿಸಿದ್ದ. ಇದರಿಂದಾಗಿ ಯುವತಿ ದೂರಾಗಿದ್ದಳು ಎನ್ನಲಾಗಿದೆ. ಹೀಗಾಗಿ ಮನನೊಂದು ಸಂತೋಷ್ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಸಾಯುವ ಮೊದಲು ವೀಡಿಯೋ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ತಮ್ಮಿಬ್ಬರ ಫೋಟೋವನ್ನು ಸಂತೋಷ್ ಹಾಕಿದ್ದಾನೆ. ತನ್ನ ಸಾವಿಗೆ ಯುವತಿಯೇ ಕಾರಣ. ಅವಳನ್ನು ಬಿಟ್ಟು ಇನ್ಯಾರು ಕಾರಣರಲ್ಲ ಎಂದು ವಿಡಿಯೋ ಮಾಡಿದ್ದಾನೆ. ಈ ಕುರಿತು ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.