ಇಸ್ಲಾಮಾಬಾದ್ : ಪಾಕಿಸ್ತಾನದ ಪೇಶಾವರದಲ್ಲಿರುವ ಅರೆಸೇನಾ ಪಡೆಯ ಪ್ರಧಾನ ಕಚೇರಿಯ ಮೇಲೆ ಸೋಮವಾರ ಭೀಕರ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಹಾಗೂ ನಂತರ ನಡೆದ ಕಾರ್ಯಾ ಕಾರ್ಯಾಚರಣೆಯಲ್ಲಿ ಒಟ್ಟು 6 ಮಂದಿ ಮತಪಟ್ಟಿದ್ದಾರೆ. ಮೃತರಲ್ಲಿ ಮೂವರು ಉಗ್ರರು ಹಾಗೂ ಮೂವರು ಭದ್ರತಾ ಸಿಬ್ಬಂದಿ ಸೇರಿದ್ದಾರೆ.
ಮೊದಲಿಗೆ ಪ್ಯಾರಾಮಿಲಿಟರಿ ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ (ಎಫ್‌ಸಿ) ಪ್ರಧಾನ ಕಚೇರಿಯ ಮುಖ್ಯ ದ್ವಾರದ ಮೇಲೆ ಒಬ್ಬ ಆತ್ಮಾಹುತಿ ದಾಳಿಕೋರ ದಾಳಿ ನಡೆಸಿದ್ದಾನೆ. ನಂತರ ಇನ್ನೊಬ್ಬನು ಕಾಂಪೌಂಡ್ ಒಳ ಪ್ರವೇಶಿಸಿದ್ದಾನೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ಸದ್ಯ ಸೇನೆ ಮತ್ತು ಪೊಲೀಸರು ಘಟನಾ ಸ್ಥಳವನ್ನು ಸುತ್ತುವರೆದಿದ್ದಾರೆ. ಕೆಲವು ಮಂದಿ ಭಯೋತ್ಪಾದಕರು ಪ್ರಧಾನ ಕಚೇರಿಯೊಳಗೆ ಅಡಗಿರುವ ಶಂಕೆ ಇದ್ದು ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿರ್ವಹಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದಾಳಿಯ ಹೊಣೆ ಹೊತ್ತ ತೆಹ್ರೀಕ್-ಇ-ತಾಲಿಬಾನ್
ಪೇಶಾವರದಲ್ಲಿರುವ ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ ಪ್ರಧಾನ ಕಚೇರಿಯ ಮೇಲಿನ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನ ಒಂದು ಬಣವಾದ ಜಮಾತುಲ್ ಅಹ್ರಾರ್ ಹೊತ್ತುಕೊಂಡಿದೆ.
ಇದನ್ನೂ ಓದಿ : 70 ಅಡಿ ಆಳದ ಕಂದಕಕ್ಕೆ ಬಿದ್ದ ಖಾಸಗಿ ಬಸ್ | ಐವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ!



















