ಬೆಳಗಾವಿ: ಮಹಿಳೆಯೊಬ್ಬರು ತಮ್ಮ 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರು ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತಮ್ಮ 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಾಯತ್ರಿ ವಾಗಮೋರೆ(26) ಎಂಬುವವರೇ ತಮ್ಮ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗು ಹಾಗೂ ತಾಯಿ ಶವವನ್ನು ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.