ಕಾರವಾರ: ವ್ಯಕ್ತಿಯೊಬ್ಬ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕೈಗಾ ನ್ಯೂಕ್ಲಿಯರ್ ಪ್ಲ್ಯಾಂಟ್ ನಲ್ಲಿ ಕೆಲಸ ಮಾಡುತ್ತಿದ್ದ ರಕ್ಷಣಾ ಸಿಬ್ಬಂದಿ ತನ್ನ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡಿದ್ದಾರೆ. ಬಿಹಾರ ಮೂಲದ ಅರವಿಂದ್ ಆತ್ಮಹತ್ಯೆ ಮಾಡಿಕೊಂಡಿರುವ ಸಿಐಎಸ್‌ಎಫ್ ಸಿಬ್ಬಂದಿ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರ ತಿಳಿದು ಬಂದಿಲ್ಲ. ವೈಯಕ್ತಿಕ ಕಾರಣವಾ? ಅಥವಾ ಅಧಿಕಾರಿಗಳ ಕಿರುಕುಳವಾ? ಎಂಬುವುದು ತನಿಖೆಯಿಂದಲೇ ತಿಳಿಯಬೇಕು. ಆದರೆ, ಈ ಘಟನೆಯಿಂದ ಆ ಪ್ರದೇಶದಲ್ಲಿ ಆತಂಕ ಮನೆ ಮಾಡಿದೆ. ಈ ಕುರಿತು ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.