ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕೊಳಲು ನುಡಿಸುವ ಶಾಲೆಗೆ ಪಾಲಕರು ಸೇರಿಸಿಲ್ಲ ಎಂದು ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್ಸೆಸ್ಸೆಲ್ಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಶೃಂಗೇರಿಯ ಹರಿಹರ ಬೀದಿಯ ಪಿಜಿಯೊಂದರಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಎಸ್.ಕೆ.ಧ್ರುವ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ವಿದ್ಯಾರ್ಥಿ ಧ್ರುವ ಕೊಳಲು ನುಡಿಸುವ ಶಾಲೆಗೆ ಸೇರಿಸುವಂತೆ ಪೋಷಕರಿಗೆ ಒತ್ತಾಯ ಮಾಡಿದ್ದ ಎನ್ನಲಾಗಿದೆ. ಆದರೆ, ಪಾಲಕರು ಮಾತ್ರ ಎಸ್ಸೆಸ್ಸೆಲ್ಸಿ ಮುಗಿದ ಮೇಲೆ ಸೇರಿಸುತ್ತೇನೆಂದು ಹೇಳಿದ್ದಾರೆ. ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.