ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪೋಕ್ಸೋ ಪ್ರಕರಣದಲ್ಲಿ ಸಮನ್ಸ್ ಜಾರಿಯಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ದಾಖಲಾಗಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಪಾಸ್ಟ್ ಟ್ರ್ಯಾಕ್ ಕೋರ್ಟ್ 1 ರಿಂದ ಸಮನ್ಸ್ ಜಾರಿಯಾಗಿದೆ.
ಮಾರ್ಚ್ 15ಕ್ಕೆ ನ್ಯಾಯಾಲಯದ ಎದುರು ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಪೊಕ್ಸೊ ಕೇಸ್ ನಲ್ಲಿ ಕೋರ್ಟ್ ಕಾಗ್ನಿಜೆನ್ಸ್ ತೆಗೆದುಕೊಂಡಿದೆ. ಈಗ ಕಾಗ್ನಿಜೆನ್ಸ್ ತೆಗೆದುಕೊಂಡ ಬೆನ್ನಲ್ಲೇ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ತೆಗೆದುಕೊಂಡಿದ್ದ ಕಾಗ್ನಿಜೆನ್ಸ್ ನ್ನ ರದ್ದು ಮಾಡಿದ್ದ ಹೈಕೋರ್ಟ್, ಹೊಸದಾಗಿ ಕಾಗ್ನಿಜೆನ್ಸ್ ತೆಗೆದುಕೊಂಡು ಸಮನ್ಸ್ ಜಾರಿ ಮಾಡಿದೆ.