ಬಾಲಿವುಡ್ (Bollywood) ನಟಿ ಸನ್ನಿ ಲಿಯೋನ್‌ಗೆ (Sunny Leone) ಕರ್ನಾಟಕದಲ್ಲಿ ಸುತ್ತಾಡುತ್ತಿದ್ದು, ಅವರನ್ನು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.
ಸನ್ನಿ ಲಿಯೋನ್ ಕನ್ನಡದಲ್ಲಿಯೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹೀಗಾಗಿ ಆಗಾಗ ಬೆಂಗಳೂರಿಗೆ ಬಂದು ಸಿನಿಮಾ ಪ್ರಚಾರ ಕಾರ್ಯಕ್ಕೂ ಸಾಥ್ ನೀಡಿದ್ದಾರೆ. ಆದರೆ, ಈಗ ತಮಿಳು ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಕಬ್ಬಳಿ ಗ್ರಾಮಕ್ಕೆ ಬಂದಿದ್ದಾರೆ.
ಕಬ್ಬಳಿ ಗ್ರಾಮಕ್ಕೆ ಆಗಮಿಸಿದ ಸನ್ನಿ, ಶಾಲೆಯಲ್ಲಿ ಶೂಟಿಂಗ್ ನಡೆಸಿದ್ದಾರೆ. ನಂತರ ಅಲ್ಲಿನ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಕಾಲ ಕಳೆದಿದ್ದಾರೆ. ಕಪ್ಪು ಬಣ್ಣ ಟೀ ಶರ್ಟ್ ಮತ್ತು ಪ್ಯಾಂಟ್‌ಗೆ ಬಿಳಿ ಬಣ್ಣದ ಶರ್ಟ್ ಧರಿಸಿದ್ದ ಸನ್ನಿ ಕಂಡು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
‘ಕೊಟೇಶನ್ ಗ್ಯಾಂಗ್’ ಚಿತ್ರದ ಬಹುತೇಕ ಚಿತ್ರೀಕರಣ ಕರ್ನಾಟಕದಲ್ಲಿ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಸಾಕಷ್ಟು ಅಭಿಮಾನಿಗಳು ಸನ್ನಿ ಲಿಯೋನ್ ಅವರನ್ನು ಭೇಟಿಯಾಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಕೊಟೇಶನ್ ಗ್ಯಾಂಗ್’ (Quotation Gang) ಚಿತ್ರದಲ್ಲಿ ಸನ್ನಿ ಜೊತೆ ಜಾಕಿ ಶ್ರಾಫ್, ಪ್ರಿಯಾ ಮಣಿ ಸೇರಿದಂತೆ ಹಲವರು ನಟಿಸಿದ್ದಾರೆ.