ಹೈದರಾಬಾದ್: ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 44 ರನ್ ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ್ದ ಸನ್ ರೈಸರ್ಸ್ ತಂಡ ದಾಖಲೆಯ ಮೊತ್ತ ಗಳಿಸಿತ್ತು.
ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ತಂಡ ಇಶಾನ್ ಕಿಶನ್ ಸಿಡಿಸಿದ ದಾಖಲೆಯ ಶತಕ(106)ದಿಂದಾಗಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 286 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು, 242 ರನ್ ಗಳಿಸಿ 44 ರನ್ ಗಳಿಂದ ಸೋಲು ಕಂಡಿತು.
ರಾಜಸ್ಥಾನ ಪರ ಧ್ರುವ್ ಜುರೆಲ್ 35 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್‌ಗಳನ್ನು ಸಿಡಿಸಿ 70 ರನ್, ಸಂಜು ಸ್ಯಾಮ್ಸನ್ 37 ಎಸೆತಗಳಲ್ಲಿ 7 ಬೌಂಡರಿ, 4 ಸಿಕ್ಸರ್‌ಗಳ ನೆರವಿನಿಂದ 66 ರನ್ ಗಳಿಸಿದರಾದರೂ ತಂಡವನ್ನು ಗೆಲ್ಲಿಸುವಲ್ಲಿ ವಿಫಲರಾದರು. ಸನ್ ರೈಸರ್ಸ್ ಪರ ಸಿಮರ್ಜೀತ್ ಸಿಂಗ್ 2 ವಿಕೆಟ್, ಆಡಮ್ ಝಂಪಾ, ಹರ್ಷಲ್ ಪಟೇಲ್ ಹಾಗೂ ಮೊಹಮ್ಮದ್ ಶಮಿ ತಲಾ ಒಂದೊಂದು ವಿಕೆಟ್ ಪಡೆದರು.
ಸನ್ ರೈಸರ್ಸ್ ತಂಡ ನೀಡಿದ ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡ, ಎರಡನೇ ಓವರ್‌ನ 3ನೇ ಎಸೆತದಲ್ಲಿ ಮೊದಲ ವಿಕೆಟ್ ಹಾಗೂ 5ನೇ ಎಸೆತದಲ್ಲಿ ಎರಡನೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಕ್ಕಿತ್ತು. ಆದರೂ ನಂತರ ಕಮ್ ಬ್ಯಾಕ್ ಮಾಡಿದರೂ ಗೆಲುವಿನ ದಡ ಸೇರಲು ಆಗಲಿಲ್ಲ. ರಾಜಸ್ಥಾನ ಪರ ತುಷಾರ್ ದೇಶಪಾಂಡೆ 3 ವಿಕೆಟ್, ಮಹೀಶ್ ತೀಕ್ಷಣ 2 ವಿಕೆಟ್, ಸಂದೀಪ್ ಶರ್ಮಾ 1 ವಿಕೆಟ್ ಪಡೆದರು.