ನವದೆಹಲಿ : ಉಪಸಭಾಪತಿ ಎಂಕೆ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ.
ಈ ಸಂಬಂಧ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ದೊರೆತಂತಾಗಿದೆ.
ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಪ್ರಾಣೇಶ್ ಅವರ ಅರ್ಜಿಯನ್ನು ಇದೀಗ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಗಾಯತ್ರಿ ಶಾಂತೇಗೌಡ ಮೇಲುಗೈ ಸಾಧಿಸಿದ್ದಾರೆ.
ಇದನ್ನೂ ಓದಿ : ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!


















