ಬೆಂಗಳೂರು: ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ (Supreme Court Junior Assistant Recruitment 2026) ಖಾಲಿ ಇರುವ 250 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 250 ಜೂನಿಯರ್ ಕೋರ್ಟ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ವಯೋಮಿತಿ ಎಷ್ಟು? ವಿದ್ಯಾರ್ಹತೆ ಏನು ಎಂಬುದು ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸುಪ್ರೀಂ ಕೋರ್ಟ್
ಒಟ್ಟು ಹುದ್ದೆಗಳು: 250
ಹುದ್ದೆಗಳ ಹೆಸರು: ಜೂನಿಯರ್ ಕೋರ್ಟ್ ಅಸಿಸ್ಟಂಟ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 28
ಅರ್ಜಿ ಸಲ್ಲಿಸಲು ಬಯಸುವವರು ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕವಿದೆ. ಜನರಲ್, ಒಬಿಸಿ ಸಮುದಾಯದವರಿಗೆ 1,500 ರೂ. ರೂಪಾಯಿ ಅರ್ಜಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 73 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https:/www.sci.gov.in/recruitments ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ:ಬೇರೆ ಸಾಲಗಳಿಗಿಂತ ಚಿನ್ನದ ಮೇಲೆ ಸಾಲ ಪಡೆಯುವುದು ಏಕೆ ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ


















