ಬೆಂಗಳೂರು: ನೀವೇನಾದರೂ ಎಸ್ಸೆಸ್ಸೆಲ್ಸಿ ಮುಗಿಸಿ ಸರ್ಕಾರದ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ದೇಶದ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 130 ಹುದ್ದೆಗಳ ನೇಮಕಾತಿಗೆ (Supreme Court of India Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸುಪ್ರೀಂ ಕೋರ್ಟ್
ಹುದ್ದೆ ಹೆಸರು: ಜೂನಿಯರ್ ಕೋರ್ಟ್ ಅಟೆಂಡೆಂಟ್
ಒಟ್ಟು ಹುದ್ದೆಗಳು: 130
ಉದ್ಯೋಗ ಸ್ಥಳ: ನವದೆಹಲಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 25
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಎಸ್ಸೆಸ್ಸೆಲ್ಸಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಗರಿಷ್ಠ ಪಿಯುಸಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಗರಿಷ್ಠ 27 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ ಹಾಗೂ ಜನರಲ್ ಅಭ್ಯರ್ಥಿಗಳಿಗೆ 1,500 ರೂ. ಅರ್ಜಿ ಶುಲ್ಕವಿದೆ. ಉಳಿದವರಿಗೆ 750 ರೂ. ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
ಅಭ್ಯರ್ಥಿಗಳು ಮೊದಲು https://www.sci.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 69 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನವೆಂಬರ್ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅಲ್ಲಿಯವರೆಗೆ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬಹುದು.



















