ಬೆಂಗಳೂರು: ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಶುಭ ಸುದ್ದಿಯೊಂದು ಸಿಕ್ಕಿದೆ. ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ (Supreme Court Recruitment 2025) ಅಧಿಸೂಚನೆ ಹೊರಡಿಸಲಾಗಿದೆ. 30 ಕೋರ್ಟ್ ಮಾಸ್ಟರ್ ಅಥವಾ ಶಾರ್ಟ್ ಹ್ಯಾಂಡ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸುಪ್ರೀಂ ಕೋರ್ಟ್
ಒಟ್ಟು ಹುದ್ದೆಗಳು: 30
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 15
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದಿರಬೇಕು. ಅಲ್ಲದೆ, ಇಂಗ್ಲಿಷ್ ನಲ್ಲಿ ನಿಮಿಷಕ್ಕೆ 120 ಪದಗಳು ಮತ್ತು ಕಂಪ್ಯೂಟರ್ ನಲ್ಲಿ ನಿಮಿಷಕ್ಕೆ 40 ಪದಗಳನ್ನು ಟೈಫ್ ಮಾಡುವ ಸಾಮರ್ಥ್ಯ ಹೊಂದಿರಬೇಕು. ಅಭ್ಯರ್ಥಿಗಳು ಸ್ಟೆನೋಗ್ರಫಿ ಅಥವಾ ಕಾರ್ಯದರ್ಶಿ ಹುದ್ದೆಯಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ತಿಳಿಸಲಾಗಿದೆ.
ಜನರಲ್ ಕೆಟಗರಿ ಅಭ್ಯರ್ಥಿಗಳಿಗೆ 1,500 ರೂ. ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ವಿಶೇಷಚೇತನರು, ಮಾಜಿ ಸೈನಿಕರಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿದಾರರ ವಯಸ್ಸು 30 ರಿಂದ 45 ವರ್ಷಗಳ ಒಳಗೆ ಇರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 67,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಆಗಿರುವ https://sci.gov.in/ ಭೇಟಿ ನೀಡಬಹುದಾಗಿದೆ.



















