ಬೆಂಗಳೂರು : ಬಿಬಿಎಂಪಿ ಚುನಾವಣೆ ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿಕೆ ಬಿಬಿಎಂಪಿ ಚುನಾವಣೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 1ರೊಳಗೆ ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಸರ್ಕಾರದ ಪರ ಹಿರಿಯ ವಕೀಲ ಎ.ಎಂ ಸಿಂಘ್ವಿ ಅವರು, ನವೆಂಬರ್ 1ರೊಳಗೆ ಕ್ಷೇತ್ರ ಪುನರ್ವಿಂಗಡಣೆ ಕಾರ್ಯ ಮುಗಿಸುತ್ತೇವೆ. ಪುನರ್ವಿಂಗಡಣೆ ಬಳಿಕ ಚುನಾವಣಾ ಪ್ರಕ್ರಿಯೆ ನಡೆಸಲು 60-90 ದಿನ ಬೇಕಾಗುತ್ತದೆ ಎಂದು ವಾದ ಮಂಡಿಸಿದರು.
ಚುನಾವಣಾ ಆಯೋಗದ ಪರ ಹಿರಿಯ ವಕೀಲ ಫಣೀಂದ್ರ ವಾದ ಮಂಡಿಸಿದ್ದರು. ನವೆಂಬರ್ 1ರೊಳಗೆ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬಿಬಿಎಂಪಿಯನ್ನು 5 ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಹೀಗಾಗಿ ನವೆಂಬರ್ 1 ರೊಳಗೆ ಕ್ಷೇತ್ರ ಪುನರ್ವಿಂಗಡಣೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದ್ದು, ಬಳಿಕ ಕ್ಷೇತ್ರವಾರು ಮತದಾರರ ಪಟ್ಟಿ ರೂಪಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.
ಜನವರಿ ಅಥವಾ ಫೆಬ್ರವರಿಯಲ್ಲಿ ಬೆಂಗಳೂರಿನ 5 ಪಾಲಿಕೆಗಳ ಚುನಾವಣೆ ನಡೆಸುವ ಸಾಧ್ಯತೆ ಇದೆ.



















