ಬೆಂಗಳೂರು : ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ A2 ಆರೋಪಿ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡುವುದಾಗಿ ಶಿವಕುಮಾರ್ ಪರವಾಗಿ ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ-ಪ್ರತಿವಾದ ನಡೆದಿದೆ.
ಈ ಪ್ರಕರಣದಲ್ಲಿ ಶಿವಕುಮಾರ್ A2 ಆರೋಪಿಯಾಗಿದ್ದಾರೆ. ಪ್ರಕರಣದ ಬಗ್ಗೆ ಸಮಗ್ರ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಲು ಅವಕಾಶ ನೀಡುವಂತೆ ಶಿವಕುಮಾರ್ ಪರ ಹಿರಿಯ ವಕೀಲ ಮಿತ್ತಳಿಕೆ ಗಂಗಾಧರ ಶೆಟ್ಟಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಈ ಅರ್ಜಿಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಅರ್ಜಿಯ ವಿಚಾರಣೆ ವೇಳೆ ಎರಡೂ ಕಡೆಯ ವಾದಗಳನ್ನು ಆಲಿಸಿರುವ ನ್ಯಾಯಾಲಯ, ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಇದೇ ತಿಂಗಳ 18ರಂದು ಪ್ರಕಟಿಸಲು ಕಾಯ್ದಿರಿಸಿದೆ. ಹೀಗಾಗಿ ಆಗಸ್ಟ್ 18ರಂದು ನ್ಯಾಯಾಲಯದ ಆದೇಶ ಏನು ಬರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರಕರಣದಲ್ಲಿ A2 ಆಗಿರುವ ಶಿವಕುಮಾರ್ ಅವರ ಅರ್ಜಿ ಅಂಗೀಕಾರವಾಗುತ್ತದೆಯೇ ಅಥವಾ ತಿರಸ್ಕಾರವಾಗುತ್ತದೆಯೇ ಎಂಬುದು ಇದೀಗ ಪ್ರಮುಖವಾಗಿದೆ. ಅರ್ಜಿ ಕುರಿತು ನ್ಯಾಯಾಲಯದ ಅಂತಿಮ ನಿಲುವಿನ ಬಳಿಕ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಸ್ಪಷ್ಟವಾಗಲಿದೆ.
ಇದನ್ನೂ ಓದಿ : ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!



















