ಬೆಂಗಳೂರು : ನಗರದಲ್ಲಿ ಜ್ಯೂಸ್ ಅಂಗಡಿ ನಡೆಸುವ ನೆಪದಲ್ಲಿ ಹೈಡ್ರೋಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದಿಂದ ಮಾದಕ ವಸ್ತು ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ಲಕ್ಷಾಂತರ ಮೌಲ್ಯದ ಹೈಡ್ರೋಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ಅಫ್ರಾನ್, ಮಹಮ್ಮದ್ ಸಾಬಿತ್ ಹಾಗೂ ಶ್ರೀನಾಥ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮಡಿವಾಳ ಭಾಗದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದು, ಅಲ್ಲಿಂದಲೇ ತಮ್ಮ ಅಕ್ರಮ ಚಟುವಟಿಕೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಬಂಧಿತರು ಬಿಟಿಎಂ ಲೇಔಟ್ ಪ್ರದೇಶದಲ್ಲಿ ಜ್ಯೂಸ್ ಅಂಗಡಿ ಇಟ್ಟುಕೊಂಡಿದ್ದರು. ಹೊರಗೆ ಸಾಮಾನ್ಯ ವ್ಯಾಪಾರ ನಡೆಸುವಂತೆ ತೋರಿಸಿಕೊಂಡು, ಒಳಗಿನಿಂದ ಹೈಡ್ರೋಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಗ್ರಾಹಕರನ್ನು ಸಂಪರ್ಕಿಸಿ ಗುಪ್ತವಾಗಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬಂಧಿತರಿಂದ ಸುಮಾರು 46 ಲಕ್ಷ ರೂಪಾಯಿ ಮೌಲ್ಯದ 464 ಗ್ರಾಂ ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಜೊತೆಗೆ ಇನ್ನೂ ಕೆಲವು ದಾಖಲೆಗಳು ಮತ್ತು ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಡ್ರಗ್ಸ್ ಜಾಲದ ಹಿಂದೆ ಇನ್ನೂ ಯಾರಿದ್ದಾರೆ ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!


















