ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಮೂರು ಜನ ಬಿಬಿಎಂಪಿ ನೌಕರರನ್ನು ಅಮಾನತುಗೊಳಿಸಲಾಗಿದೆ.
ಹೆಚ್.ಬಿ.ಆರ್ ಲೇಔಟ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷ ರಮೇಶ್, ಕಂದಾಯ ವಸೂಲಿಗಾರ ಪೆದ್ದುರಾಜು ಹಾಗೂ ಕೆಂಗೇರಿ ಉಪ ವಿಭಾಗ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ವಸೂಲಿಗಾರ ಸಿ. ಸಂದಿಲ್ ಕುಮಾರ್ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತುಗೊಂಡಿದ್ದಾರೆ.