ಆರ್ ಸಿಬಿ ಸಂಭ್ರಮಾಚರಣೆ ದುರಂತ ಪ್ರಕರಣದಲ್ಲಿ ಗಾಯಗೊಂಡವರ ಚಿಕಿತ್ಸೆ ಹೊಣೆಯನ್ನು ಸರ್ಕಾರ ಹೊತ್ತಿದೆ. ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನ ಖುದ್ದು ಸರ್ಕಾರವೇ ಭರಿಸಲಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದಿದ್ದಾರೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ಸೂಚನೆ ನೀಡಲಾಗಿದೆ.