ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಖಾಲಿ ಇರುವ 35 ಹುದ್ದೆಗಳ ನೇಮಕಾತಿಗಾಗಿ (Suvarna Arogya Suraksha Trust Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಜೆಕ್ಟ್ ಮ್ಯಾನೇಜರ್, ಡಾಕ್ಟರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಮ್ಯಾನೇಜರ್, ಡಾಕ್ಟರ್ ಇತ್ಯಾದಿ
ಒಟ್ಟು ಹುದ್ದೆಗಳು: 35
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಡಿಸೆಂಬರ್ 5
ಸರ್ವರಿಗೂ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ಸೇವೆಗಳನ್ನು ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ. ರೋಗ ತಡೆಯುವಿಕೆ, ರೋಗ ಪರಿಹರಿಸುವಿಕೆ ಮತ್ತು ಆರೋಗ್ಯ ಆರೈಕೆ ಮರುಸ್ಥಾಪಿಸುವಿಕೆಯ ಸಮಗ್ರ ಆರೋಗ್ಯ ಪಾಲನಾ ದೃಷ್ಟಿಕೋನದೊಂದಿಗೆ ರಾಜ್ಯದ ಎಲ್ಲಾ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸಾಧ್ಯವಾದಷ್ಟು ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶಗಳನ್ನು ಹೊಂದಿದೆ. ಇಂತಹ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ, ಬಿಟೆಕ್, ಎಂಬಿಬಿಎಸ್, ಬಿಡಿಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳ ಅನ್ವಯ ಮಾಸಿಕ 1.5 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ sast.karnataka.gov.in/sast ಗೆ ಭೇಟಿ ನೀಡಿ.
ಸಂದರ್ಶನ ನಡೆಯುವ ಸ್ಥಳ
Suvarna Arogya Suraksha Trust, Arogya Soudha, 7th Floor, Bangalore – 560023
ಇದನ್ನೂ ಓದಿ ; IRCTCಯಲ್ಲಿ 50 ಹುದ್ದೆಗಳ ನೇಮಕಾತಿ : ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್



















