ಹಾವೇರಿ: ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಸ್ವಾತಿ ಕೊಲೆಯ ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಈಗ ಸಿಎಂ ಅವರನ್ನು ಭೇಟಿ ಮಾಡಿದ್ದ ಸಚಿವ ಶಿವಾನಂದ ಪಾಟೀಲ್ ಆದೇಶ ಮಾಡಿಸಿದ್ದಾರೆ. ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಈಚೆಗೆ ಹತ್ಯೆಗೀಡಾಗಿದ್ದರು. ಶಾಸಕ ಯು.ಬಿ. ಬಣಕಾರ್ ಅವರೊಂದಿಗೆ ಶಿವಾನಂದ್ ಪಾಟೀಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಸಿಎಂ ಸಿದ್ದರಾಮಯ್ಯ ಸಂತ್ರಸ್ತೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ವಾತಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧವಾಗಿದೆ. ಹತ್ಯೆ ಮಾಡಿದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಪ್ರಕರಣವನ್ನು ದುರ್ಬಲಗೊಳಿಸದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.