ಕೋಲಾರ: ಧ್ವಜಾರೋಹಣ ಕಾರ್ಯಕ್ರಮದ ವೇಳೆ ತಲ್ವಾರ್ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಕೋಲಾರ ನಗರದ ಮಹಾಲಕ್ಷ್ಮಿ ಬಡಾವಣೆಯ ಅಹಮದ್ ಪೀರ್ ಅಲಿಯಾಸ್ ಜಾವಾ ಬಂಧಿತ ಆರೋಪಿ. ಧ್ವಜಾರೋಹಣ ಕಾರ್ಯಕ್ರಮದ ವೇಳೆ ಮುಸ್ತಫಾ ಎಂಬುವರಿಗೆ ಉಡುಗೊರೆಯಾಗಿ ತಲ್ವಾರ್ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಘಟನೆಯ ವೇಳೆ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಅಹಮದ್ ಪೀರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ತಲ್ವಾರ್‌ನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಿದ್ದಾರೆ.
ಅಜ್ಮೀರ್‌ನಿಂದ ತಲ್ವಾರ್ ಖರೀದಿಸಿ ತಂದಿದ್ದ ಅಹಮದ್ ಪೀರ್, ಅದನ್ನು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಡುಗೊರೆಯಾಗಿ ನೀಡಿದ್ದ ಎನ್ನಲಾಗಿದೆ. ಪ್ರಕರಣದ ಕುರಿತು ಕೋಲಾರ ನಗರ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!



















