ತುಮಕೂರು: ರಾಜ್ಯ ತೆಂಗಿನ ನಾರಿನ ಸಹಕಾರಿ ಮಹಾಮಂಡಳಿಯ ನೂತನ ಅಧ್ಯಕ್ಷರಾಗಿ ಟಿ.ಎಸ್. ಕಿಡಿಗಣ್ಣಪ್ಪ ಆಯ್ಕೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಹಲವು ವರ್ಷಗಳಿಂದ ನಿರಂತರವಾಗಿ ತೆಂಗು ಬೆಳೆಗೆ ಸಂಬಂಧಪಟ್ಟಂತಹ ಹಲವು ರೀತಿಯ ಪ್ರಯೋಜನಕಾರಿ ವಸ್ತುಗಳನ್ನು ತಯಾರಿ ಮಾಡಿ ರೈತರಿಗೆ ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಹಕಾರ ನೀಡಲಾಗಿದೆ. ನನ್ನನು ಅಧ್ಯಕ್ಷರಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಎಂಎಲ್ ಸಿ ರಾಜೇಂದ್ರ ಅವರಿಗೆ ಧನ್ಯವಾದ ಎಂದು ಹೇಳಿದ್ದಾರೆ.
ರೈತರಿಗೆ ಅನುಕೂಲವಾಗುವ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗುವ ಹಲವು ಯೋಜನೆಗಳನ್ನು ಜಾರಿಗೆ ತರಲು ಯತ್ನಿಸಲಾಗುವುದು ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ವಿಎಸ್ ಎಸ್ ಎನ್ ಅಧ್ಯಕ್ಷ ಚಿದಾನಂದ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಶೇಖರಬಾಬು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರಸ್ವಾಮಿ, ಗ್ರಾಪಂ ಸದಸ್ಯ ಪತ್ರೆ ದಿನೇಶ್, ನಿರಂಜನ್ ಮೂರ್ತಿ, ಬಾಬು ಸೇರಿದಂತೆ ಹಲವರು ಇದ್ದರು.


















