ಮುಂಬೈ | ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯ ಇಂದು ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆಯುತ್ತಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ.
ಈಗಾಗಲೇ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ನ್ಯೂಜಿಲೆಂಡ್ ಫೈನಲ್ಗೆ ಪ್ರವೇಶ ಪಡೆದಿದೆ. ಪ್ರಶಸ್ತಿ ಸುತ್ತು ಪ್ರವೇಶಿಸುವ ಇನ್ನೊಂದು ತಂಡ ಯಾವುದು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ. ಉಭಯ ತಂಡಗಳ ನಡುವಣ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಈಗಾಗಲೇ ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಬಾರಿ ಮುಖಾಮುಖಿಯಾಗಲಿದ್ದಾರೆ. ಉಭಯ ತಂಡಗಳು ಈಗಾಗಲೇ ಟಿ20 ವಿಶ್ವಕಪ್ನಲ್ಲಿ 5 ಬಾರಿ ಕಾದಾಟ ನಡೆಸಿದ್ದವು. ಈ ವೇಳೆ ಭಾರತ ಮೂರು ಪಂದ್ಯದಲ್ಲಿ ಜಯ ಸಾಧಿಸಿತ್ತು. ನಾಲ್ಕನೇ ಗೆಲುವಿನ ಹುಡುಕಾಟದಲ್ಲಿ ಭಾರತ ತಂಡ ಇಂದು ಕಣಕ್ಕೆ ಇಳಿಯಲಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕ್ಯಾಪ್ಟನ್ ಸೂರ್ಯಕುಮಾರ್ ತಿಳಿಸಿದ್ದಾರೆ.
ಭಾರತ ತಂಡ : ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ಇಂಗ್ಲೆಂಡ್ ತಂಡ : ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್ (ನಾಯಕ), ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಮೀ ಓವರ್ಟನ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್.
ಇದನ್ನೂ ಓದಿ : ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್



















