ಮೈಸೂರು: ಮೈಸೂರು ಸ್ಯಾಂಡಲ್ ಸೋಪ್ ಬ್ರ್ಯಾಂಡ್‌ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಇಂದು ಅಧಿಕೃತವಾಗಿ ಕಾರ್ಯಾರಂಭ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು(ಫೆ.10) ಮಧ್ಯಾಹ್ನ 3 ಗಂಟೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ನಟಿ ತಮನ್ನಾ ಭಾಗಿ ಆಗಲಿದ್ದಾರೆ.
ಗಮನಾರ್ಹವಾಗಿ, ಈ ಹಿಂದೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದ ವೇಳೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೂ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಮತ್ತೊಮ್ಮೆ ತಮನ್ನಾ ಭಾಟಿಯಾ ಅವರನ್ನೇ ಬ್ರ್ಯಾಂಡ್ ರಾಯಭಾರಿಯಾಗಿ ಆಯ್ಕೆ ಮಾಡಿದೆ.
ಇದನ್ನೂ ಓದಿ : ಇಂದು ರಿಷಬ್ ಶೆಟ್ಟಿ ದಂಪತಿಗೆ ಮದುವೆ ವಾರ್ಷಿಕೋತ್ಸವದ ಸಂಭ್ರಮ



















