ತಮಿಳುನಾಡು: ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಮತ್ತೆ ಕಿರಿಕ್ ತೆಗೆದಿದೆ. ಯೋಜನೆಗೆ ಅನುಮೋದನೆ ನೀಡದಂತೆ ವಿಜಯ್ ಮನವಿ ಮಾಡಿದ್ದಾರೆ. ಪ್ರಧಾನಿ ಮೋದಿ ಕರ್ನಾಟಕದ ಪರ ಮಾತನಾಡಬಾರದು ಎಂದು ತಮಿಳುನಾಡು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ನಮ್ಮ ಕೆಲಸವನ್ನು ನಾವು ಮಾಡುತ್ತೇವೆ ಎಂದಿದ್ದಾರೆ.
ಈ ಯೋಜನೆಗೆ ತಮಿಳುನಾಡು ಕಾಂಗ್ರೆಸ್ನಿಂದಲೂ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ನಲ್ಲಿ ಶುರುವಾದ ಮೇಕೆದಾಟು ಗುದ್ದಾಟ ಈಗ ಬಿಜೆಪಿಗೆ ಅಸ್ತ್ರವಾಗಿದೆ. ಎಲ್ಲಿದೀಯಪ್ಪ ರಾಹುಲ್, ಮೇಕೆದಾಟು ಅಪ್ಪಿಕೊ ಬಾ ಎಂದು ಬಿಜೆಪಿ ಲೇವಡಿ ಮಾಡಿದೆ. ಈ ಮೂಲಕ ಬಿಜೆಪಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದೆ.



















