ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ನಡೆದಿದೆ. ದೊಮ್ಮಸಂದ್ರದಿಂದ ವರ್ತೂರು ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅತಿವೇಗದ ಚಾಲನೆಯಿಂದ ಟ್ಯಾಂಕರ್ ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಟ್ಯಾಂಕರ್ ಪಲ್ಟಿಯಾದ ದೃಶ್ಯ ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.