ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ಇತ್ತೀಚೆಗಷ್ಟೇ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ನಿರ್ದೇಶಕರಾಗಿ ವಿ.ರಾಮಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ನೂತನ ನಿರ್ದೇಶಕರಾಗಿ ವಿಸಿಎನ್ ಆರ್ ಗ್ರೂಪ್ ಸಂಸ್ಥಪಕ ವಿ.ರಾಮಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿ.ರಾಮಸ್ವಾಮಿ ಹಲವಾರು ಸಮಾಜಮುಖಿ ಸೇವೆಗಳಿಂದ ಗುರುತಿಸಿಕೊಂಡಿದ್ದು, ಸಾಕಷ್ಟು ಕಾರ್ಯಗಳನ್ನು ಮಾಡಿದ್ದಾರೆ. ಈಗ ಅವರು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನಿರ್ದೇಶಕರಾಗಿದ್ದಾರೆ.
