ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲ ಎನ್ನುವಂತಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಇದ್ದ ವೇಳೆ ಸಿಕ್ಕ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿತ್ತು. ಅಂತಹದ್ದೇ ಮತ್ತೊಂದು ಘಟನೆ ನಡೆದಿದೆ.
ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನ ಆಗಿರುವ ನಟಿ ರನ್ಯಾ ರಾವ್ ಪ್ರಿಯಕರ ತರುಣ್ ರಾಜ್ ಜೈಲಿನಲ್ಲಿ ಬಿಂದಾಸ್ ಲೈಫ್ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರನ್ಯಾ ರಾವ್ ಪ್ರಿಯಕರ ತೆಲುಗು ಸಿನಿಮಾ ನಟ ತರುಣ್ ರಾಜ್ ಕೂಡ ಬಿಂದಾಸ್ ಲೈಫ್ ಲೀಡ್ ಮಾಡ್ತಿದ್ದಾನೆ. ಮೊಬೈಲ್ ಜೊತೆಗೆ ಟಿವಿ ಸೌಲಭ್ಯ ಕಲ್ಪಿಸಿರೋದು ವೈರಲ್ ಆಗಿರುವ ವಿಡಿಯೋದಿಂದ ಗೊತ್ತಾಗಿದೆ. ಕೈದಿಗಳ ರಾಜಾತಿಥ್ಯಕ್ಕೆ ಹೆಸರುವಾಸಿಯಾಗಿರುವ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು, ಸಿಬ್ಬಂದಿಗೆ ಈಗ ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ : ಸಿಮೆಂಟ್ ಮಿಕ್ಸರ್ ಲಾರಿ ಎಡವಟ್ಟು | ಮನೆ ಗೋಡೆ ಕುಸಿದು ಮಗು ಸಾವು



















