ಹಾವೇರಿ : ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 20 ಮಂದಿ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ಮಲೇಬೆನ್ನೂರಿನ ನಿವಾಸಿಗಳಾದ ಚಮನಸಾಬ್ ಕೆರಿಮತ್ತಿಹಳ್ಳಿ (65 ವರ್ಷ), ಮಾಬುಸಾಬ್ ದೊಡ್ಡಗುಬ್ಬಿ (65 ವರ್ಷ), ನಿಂಗಮ್ಮ ಜಿಗಳೇರ್ (70ವ) .ಮೃತಪಟ್ಟ ದುರ್ದೈವಿಗಳು.
ಸದ್ಯ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಅಂಬ್ಯುಲೆನ್ಸ್ ಮೂಲಕ ಗಾಯಾಳನ್ನು ರಾಣೇಬೆನ್ನೂರು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.